ರಾಜ್ಯ

ಮತ್ತೆ ನಂದಿನ ಹಾಲಿನ ದರ ಹೆಚ್ಚಳ ಗ್ಯಾರಂಟಿ ಎಂದ ಸಿಎಂ

ಮಾಗಡಿ(ರಾಮನಗರ): ಕಳೆದ ಜೂನ್‌ನಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ, ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ.

ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಗ್ಯಾರಂಟಿ. ಈ ಹೆಚ್ಚಳದ ಮಾಡಿದ ಹಾಲಿನ ದರ ನೇರವಾಗಿ ರೈತರಿಗೆ ಹೋಗಬೇಕು ಎಂದಿದ್ದಾರೆ.

ಹಾಲಿನ ದರ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹೆಚ್ಚಳ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ

ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು  ಭರವಸೆ ನೀಡಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆ ಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.

ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ

ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ  ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ.

ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರ ಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು.

ಎಸ್ ಸಿ ಎಸ್ ಪಿ / ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು.

ಮೋದಿಯವರು ಬಂಡವಾಳಶಾಹಿಗಳ ಪರ

ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

24 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

36 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

47 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago