ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.
ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಸಿದ್ದರಾಮಯ್ಯ ಆಗಮಿಸಿ 12:30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹಾಸನಾಂಬೆ ದರ್ಶನದ ಬಳಿಕ ಎಸ್.ಎಂ.ಕೃಷ್ಣನಗರದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾಸನದ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಭದ್ರತೆ ಇದ್ದು, ಹಾಸನಾಂಬೆ ದೇಗುಲದ ಆವರಣದಲ್ಲೂ ಖಾಕಿ ಸರ್ಪಗಾವಲಿದೆ.
ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…
ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…