ಕಲಬುರಗಿ : ಬಿಜೆಪಿಯ ವಿರುದ್ಧ ಆಪರೇಷನ್ ಕಮಲ ಆರೋಪ ಮಾಡುವ ಕಾಂಗ್ರೆಸ್‌ನವರ ಸರ್ಕಾರ ಪತನವಾದರೆ ಅದು ಅವರ ಪಕ್ಷದವರಿಂದಲೆ ಆಗಿರುತ್ತದೆ. ಅವರಲ್ಲಿನ ಗೊಂದಲಗಳಿಂದಲೇ ರಾಜ್ಯ ಸರ್ಕಾರ ಬೀಳಲಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿನ ದ್ವಂದ್ವ ನಿಲುವುಗಳಿಂದ ಈ ಸರ್ಕಾರ ಬಿದ್ದುಹೋಗಲಿದೆ. ಅದಕ್ಕೆ ಬಿಜೆಪಿ ಕಾರಣವಾಗುವುದಿಲ್ಲ. ಯಾಕೆಂದರೆ ಈ ಕಾಂಗ್ರೆಸ್ ಸರ್ಕಾರ ಬ್ಯಾಲೆನ್ಸ್ ತಪ್ಪಿ, ಒಳಜಗಳ ಪ್ರಾರಂಭವಾಗಿದೆ. ಅವರಿಗೆ ರೈತರ ಏಳಿಗೆ ಮುಖ್ಯವಾಗಿಲ್ಲ, ರಾಜ್ಯದ ಜನರ ಕುರಿತು ಚಿಂತೆ ಇಲ್ಲ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಾಲ್ಕು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅವರಲ್ಲೇ ಇನ್ನೂ ಸ್ಪಷ್ಟತೆ ಇಲ್ಲ, ಒಮ್ಮೆ ಸಿದ್ದರಾಮಯ್ಯ ನಾನೇ ಐದು ವರ್ಷ ಮುಖ್ಯಮಂತ್ರಿ ಎನ್ನುತ್ತಾರೆ. ಮತ್ತೊಮ್ಮೆ ಮಾಧ್ಯಮಗಳ ಮೇಲೆ ಆರೋಪಿಸುತ್ತಾರೆ. ಇಷ್ಟೊಂದು ಸುಳ್ಳುಗಳನ್ನು ಯಾಕೆ ಅವರು ಹೇಳುತ್ತಿದ್ದಾರೆ ಎನ್ನುವುದು ನನಗೆ ಗೊತ್ತಾಗುತ್ತಿಲ್ಲ. ಇಂದು ಹೇಳಿದ್ದನ್ನು ನಾಳೆ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೇವಲ ಗ್ಯಾರಂಟಿಗಳ ಬಗ್ಗೆನೇ ಮಾತನಾಡುವ ಕಾಂಗ್ರೆಸ್‌ನವರಿಗೆ ರಾಜ್ಯದ ಜನರ ಹಿತ ಕಾಯುವುದು ಮುಖ್ಯವಾಗಿಲ್ಲ. ಪದೇ ಪದೇ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿ ಆರೋಪಿಸುವ ಬದಲು, ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವ ಕೆಲಸ ಮಾಡಲಿ ಎಂದು ಬಿ.ಸಿ.ಪಾಟೀಲ್ ಒತ್ತಾಯಿಸಿದ್ದಾರೆ.
ಟೆಹರಾನ್: ಇರಾನ್ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ…
ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…
ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…