ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ಕೆಲ ಸುಧಾರಣೆಗಳನ್ನು ತಂದಿದ್ದು, ಅದನ್ನೇ ನೆಪ ಮಾಡಿಕೊಂಡು ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. 140 ಶಾಸಕರ ಬೆಂಬಲವಿದೆ ಎಂಬ ದರ್ಪದಲ್ಲಿ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಅವರು ಕಿಡಿಕಾರಿದರು.
ಸದನದ ದುರ್ಬಳಕೆಗೆ ಸರ್ಕಾರ ಮುಂದಾಗಿದ್ದು ದುರ್ದೈವ. ಮನ್ರೇಗಾದಲ್ಲಿ ಕೆಲವು ಮಾರ್ಪಾಡುಗಳನ್ನು ತಂದಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾದಿಯಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಬಡವರಿಗಾಗಿ, ಕಾಂಗ್ರೆಸ್ ಪುಡಾರಿಗಳಿಗಲ್ಲ. ರಾಜ್ಯಪಾಲರ ಮೂಲಕ ಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. 140 ಶಾಸಕರ ಬೆಂಬಲ ಇದ್ದರೂ ದಬ್ಬಾಳಿಕೆ ಮಾಡುತ್ತಿದ್ದಾರೆ. ಸರ್ಕಾರ ನಡವಳಿಕೆ ಸರಿಪಡಿಸಿಕೊಳ್ಳದಿದ್ದರೆ, ಜನರು 40ಕ್ಕೆ ಇಳಿಸಲು ಕಾಯುತ್ತಿದ್ದಾರೆ ಎಂದು ಎಚ್ಚರಿಸಿದರು.
ಉದ್ಯೋಗ ಖಾತ್ರಿ ಯೋಜನೆ ಬಡವರಿಗೆ ಉಪಯೋಗ ಆಗಲಿ ಎಂದು ತಿದ್ದುಪಡಿ ಮಾಡಲಾಗಿದೆ. ಇದು ಬಡವರಿಗೆ ಇರುವ ಯೋಜನೆ ಹೊರೆತು, ಕಾಂಗ್ರೆಸ್ ಪುಡಾರಿಗಳಿಗಾಗಿ ಅಲ್ಲ. ರಾಜ್ಯಪಾಲರ ಮುಖೇನ ಕೇಂದ್ರದ ವಿರುದ್ಧ ಜನರನ್ನ ಎತ್ತಿಕಟ್ಟುವ ಕೆಲಸ ಮಾಡಲು ಸರ್ಕಾರ ಹೊರಟಿದೆ. ಮೊದಲು ಸಂವಿಧಾನದ ಗೌರವವನ್ನು ಸರ್ಕಾರ ಉಳಿಸಬೇಕೆಂದು ಆಗ್ರಹಿಸಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…