ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್.ಸಿ.ಮಹದೇವಪ್ಪ, ಜಮೀರ್ ಆಹಮ್ಮದ್ ಖಾನ್, ಎನ್.ಎಸ್.ಬೋಸರಾಜು, ದಿನೇಶ್ ಗುಂಡೂರಾವ್ ಮತ್ತು ರಹೀಂ ಖಾನ್ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರದಿಂದ ಗುತ್ತಿಗೆದಾರರಿಗೆ ಸಾಕಷ್ಟು ಹಣ ಬರಬೇಕಿದೆ. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸದ ಕಾರಣ ಹಲವಾರು ಗುತ್ತಿಗೆದಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಯ ಬಳಿ ಬಾಕಿ ಕೇಳಿದರೆ ಸಚಿವರನ್ನು ಭೇಟಿಯಾಗಿ ಎನ್ನುತ್ತಾರೆ. ಸಚಿವರ ಗಮನಕ್ಕೆ ತಂದರೆ ನಿರ್ಲಕ್ಷ್ಯ ಮಾಡುತ್ತಾರೆ ಎಂದು ಪತ್ರದಲ್ಲಿ ಅಸಮಾಧಾನ ಹೊರಹಾಕಿದೆ.
ಅಧಿಕಾರಿಗಳು ಹಾಗೂ ಸಚಿವರ ಈ ವರ್ತನೆಗೆ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಾಕಿ ಹಣ ಪಾವತಿ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…