ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ: ಹೋರಾಟದ ಎಚ್ಚರಿಕೆ

ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಸಿ.ಮಹದೇವಪ್ಪ, ಜಮೀರ್‌ ಆಹಮ್ಮದ್‌ ಖಾನ್‌, ಎನ್‌.ಎಸ್‌.ಬೋಸರಾಜು, ದಿನೇಶ್ ಗುಂಡೂರಾವ್‌ ಮತ್ತು ರಹೀಂ ಖಾನ್‌ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರದಿಂದ ಗುತ್ತಿಗೆದಾರರಿಗೆ ಸಾಕಷ್ಟು ಹಣ ಬರಬೇಕಿದೆ. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸದ ಕಾರಣ ಹಲವಾರು ಗುತ್ತಿಗೆದಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಯ ಬಳಿ ಬಾಕಿ ಕೇಳಿದರೆ ಸಚಿವರನ್ನು ಭೇಟಿಯಾಗಿ ಎನ್ನುತ್ತಾರೆ. ಸಚಿವರ ಗಮನಕ್ಕೆ ತಂದರೆ ನಿರ್ಲಕ್ಷ್ಯ ಮಾಡುತ್ತಾರೆ ಎಂದು ಪತ್ರದಲ್ಲಿ ಅಸಮಾಧಾನ ಹೊರಹಾಕಿದೆ.

ಅಧಿಕಾರಿಗಳು ಹಾಗೂ ಸಚಿವರ ಈ ವರ್ತನೆಗೆ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಾಕಿ ಹಣ ಪಾವತಿ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago