Mysore
14
few clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಜುಲೈ.14ರಂದು ದೇಶದ 2ನೇ ಅತಿ ಉದ್ದದ ಸಿಗಂದೂರು ಕೇಬಲ್‌ ಸೇತುವೆ ಲೋಕಾರ್ಪಣೆ

Sigandur Cable Bridge

ಶಿವಮೊಗ್ಗ: ಜುಲೈ.14ರಂದು ದೇಶದ 2ನೇ ಅತಿ ಉದ್ದದ ಸಿಗಂದೂರು ಕೇಬಲ್‌ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ.14ರಂದು ಚಾಲನೆ ಸಿಗಲಿದೆ.

ಲೋಕಾರ್ಪಣೆ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಪ್ರಹ್ಲಾದ್‌ ಜೋಶಿ ಸೇರಿದಂತೆ ಹಲವು ಭಾಗಿಯಾಗಲಿದ್ದಾರೆ. ಈ ಸೇತುವೆಗೆ ಸಿಗಂಧೂರು ಚೌಡೇಶ್ವರಿ ದೇವಿ ಹೆಸರು ಇಡಲು ರಾಜ್ಯ ಸರ್ಕಾರ ಶಿಫಾರಸು ಮಾಡಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.

470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್‌ ಆಧಾರಿತ ಸೇತುವೆ ಇದಾಗಿದ್ದು, ಈ ಸೇತುವೆಯ ಕಾಮಗಾರಿ 2020ರ ಡಿಸೆಂಬರ್‌ನಲ್ಲಿ ಆರಂಭವಾಗಿತ್ತು.

Tags:
error: Content is protected !!