Mysore
24
broken clouds

Social Media

ಬುಧವಾರ, 29 ಏಪ್ರಿಲ 2026
Light
Dark

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ಕೋರ್ಟ್‌

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ.

ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ.

ಮಹಿಳೆಯ ಅತ್ಯಾಚಾರದಲ್ಲಿ ನನ್ನ ಪಾತ್ರ ಇಲ್ಲ. ಆದ್ದರಿಂದ ಈ ಪ್ರಕರಣದಿಂದ ಪ್ರಜ್ವಲ್‌ ರೇವಣ್ಣರನ್ನು ಕೈಬಿಡುವಂತೆ ಪ್ರಜ್ವಲ್‌ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಪ್ರಜ್ವಲ್‌ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದೇ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದ್ದು, ನ್ಯಾಯಾಧೀಶರ ಮುಂದೆ ಪ್ರಜ್ವಲ್‌ ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ರೇವಣ್ಣಗೆ ಶಾಕ್‌ ಮೇಲೆ ಶಾಕ್‌ ಎದುರಾಗುತ್ತಿದೆ.

Tags:
error: Content is protected !!