ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ.
ಮಹಿಳೆಯ ಅತ್ಯಾಚಾರದಲ್ಲಿ ನನ್ನ ಪಾತ್ರ ಇಲ್ಲ. ಆದ್ದರಿಂದ ಈ ಪ್ರಕರಣದಿಂದ ಪ್ರಜ್ವಲ್ ರೇವಣ್ಣರನ್ನು ಕೈಬಿಡುವಂತೆ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದೇ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದ್ದು, ನ್ಯಾಯಾಧೀಶರ ಮುಂದೆ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…