ರಾಜ್ಯ

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನ್ಯಾಯಮೂರ್ತಿ ಕೆ.ಎಸ್.ಮುದುಗಲ್‌ ಹಾಗೂ ಟಿ.ವೆಂಕಟೇಶ ನಾಯಕ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ತೀರ್ಪು ನೀಡಿತ್ತು.

ಜೀವಾವಧಿ ಶಿಕ್ಷೆ ಜೊತೆಗೆ 5 ಲಕ್ಷ ರೂ ದಂಡ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮೈಸೂರು ಜಿಲ್ಲೆಯ ಕೆ.ಆರ್.‌ನಗರದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

13 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

4 hours ago