ರಾಜ್ಯ

ನಾಯಕತ್ವ ಬದಲಾವಣೆಯ ಕೂಗು ; ಇತಿಶ್ರೀ ಹಾಡದಿದ್ದರೆ ಪಕ್ಷಕ್ಕೆ ಹಾನಿ : ಸವದಿ

ಬೆಂಗಳೂರು : ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಗೆ ರಾಷ್ಟ್ರೀಯ ನಾಯಕರು ಶೀಘ್ರವೇ ಇತೀಶ್ರಿ ಹಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವುದಾಗಿ, ಸಿದ್ದರಾಮಯ್ಯ ಮಾತು ಕೊಟ್ಟಿದ್ದಾರೋ?, ಇಲ್ಲವೋ? ತಮಗೆ ಗೊತ್ತಿಲ್ಲ. ಅದು ನಮ್ಮವರೆಗೂ ಚರ್ಚೆಯಾಗುವ ವಿಷಯವಲ್ಲ ಎಂದರು.

ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ರಾಷ್ಟ್ರೀಯ ನಾಯಕರ ನಡುವೆ ನಡೆದ ಚರ್ಚೆ. ನಮಗೆ ಇದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಇದನ್ನು ಓದಿ: ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ : ಗೃಹ ಸಚಿವ ಪರಮೇಶ್ವರ

ಸಚಿವ ಸಂಪುಟಕ್ಕೆ ಸೇರಲು ತಾವೂ ಕೂಡ ಆಕಾಂಕ್ಷಿ. ರಾಜಕಾರಣಿಗಳು ಸನ್ಯಾಸಿಗಳಲ್ಲ ಶಾಸಕರಾಗಬೇಕು, ಸಚಿವರಾಗಬೇಕು, ಒಳ್ಳೆಯ ಖಾತೆ ಬೇಕು ಎಂಬೆಲ್ಲಾ ಆಸೆಗಳಿರುತ್ತವೆ. ಹಂತ ಹಂತವಾಗಿ ಮೇಲೇರಬೇಕು ಎಂಬ ಆಸೆಗೆ ಮಿತಿ ಇರುವುದಿಲ್ಲ ಎಂದು ಹೇಳಿದರು.

ಪ್ರಸ್ತುತ ರಾಜಕಾರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಟ್ಟುಕೊಡಲು ಇಚ್ಚಿಸುವುದಿಲ್ಲ. ಇನ್ನೂ ಮಂತ್ರಿಗಳು ಸ್ಥಾನ ಬಿಟ್ಟುಕೊಡುತ್ತಾರೆಯೇ ಎಂದ ಅವರು ತಮಗೆ ಸಚಿವ ಸ್ಥಾನದ ಬಗ್ಗೆ ಸಂದರ್ಭ ಬಂದಾಗ ಚರ್ಚೆ ಮಾಡುತ್ತೇನೆ ಎಂದರು.

ರಾಜಕೀಯಕ್ಕೆ ಸಂಬಂಧಪಟ್ಟಂತೆ ತಾವಾಗಲೀ, ತಮ್ಮ ಬೆಂಬಲಿಗರಾಗಲೀ ದಿಲ್ಲಿ ಸೇರಿದಂತೆ ಎಲ್ಲಿಗೂ ಹೋಗುವುದಿಲ್ಲ. ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದು ಸ್ಪಷ್ಟ ಪಡಿಸಿದರು.

ಪ್ರಸ್ತುತ ರಾಜಕೀಯ ಗೊಂದಲಗಳ ಹಿನ್ನೆಲೆಯಲ್ಲಿ ಶಾಸಕರನ್ನು ಸೆಳೆಯಲು ನೂರು ಕೋಟಿ ರೂಪಾಯಿಗಳ ಆಫರ್ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಲಕ್ಷ್ಮಣ ಸವದಿ, ೨೦೧೯ ರಲ್ಲಿ ತಾವು ಮಾಡಿದನ್ನು ಬಿಜೆಪಿಯ ನಾಯಕರು ಸ್ಮರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಮೆಲುಕು ಹಾಕುತ್ತಿರಬಹುದು ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

10 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

10 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

14 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

14 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

14 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

14 hours ago