Mysore
22
clear sky

Social Media

ಶನಿವಾರ, 21 ಮಾರ್ಚ್ 2026
Light
Dark

ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ.

ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್, ಈ ಹಿಂದೆ ತಮ್ಮ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಮಿತಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿತ್ತು. ಅದನ್ನು ಆಧರಿಸಿ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಯಾವುದೇ ಸಕಾರಣ ನೀಡದೆ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದೆ. ರಾಜ್ಯ ಸರ್ಕಾರ ಮತ್ತೊಮ್ಮೆ ವಿವರಣೆ ಹಾಗೂ ಸ್ಪಷ್ಟನೆಗಳೊಂದಿಗೆ ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:-ಸುದೀಪ್‍ ಸೋದರಳಿಯ ಸಂಚಿತ್‍ ಅಭಿನಯದ ‘ಮ್ಯಾಂಗೋ ಪಚ್ಚ’ ಚಿತ್ರದ ಟೀಸರ್ ಬಂತು

ಲಿಂಗಾಯತ ಧರ್ಮಕ್ಕೆ ಧಾರ್ಮಿಕ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ಸಿಗುವವರೆಗೂ ಹೋರಾಟ ಮುಂದುವರೆಯಬೇಕು. ಈ ಹೋರಾಟದಲ್ಲಿ ಮಿತ್ರರು ಯಾರು, ಶತ್ರುಗಳು ಯಾರು ಎಂದು ಗುರುತಿಸಲು ಸಾಧ್ಯವಾಗಬೇಕು. ಶತ್ರುಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋರಾಟ ನಡೆಸಿದರೆ, ಅದು ಯಶಸ್ವಿಯಾಗುವುದಿಲ್ಲ. ಶತ್ರುಗಳನ್ನು ಹೊರಗಿಟ್ಟು ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು.

ಸಮಾನ ಮನಸ್ಕರ ಜೊತೆಗೂಡಿ ಸೈದ್ಧಾಂತಿಕವಾಗಿ ಹೋರಾಟ ನಡೆಸಿದರೆ, ಖಂಡಿತ ಯಶಸ್ಸು ಸಿಗುತ್ತದೆ ಎಂದು ನಾಗಮೋಹನ್‍ದಾಸ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀಕ್ಷೇತ್ರ ಶ್ರೀ ಸಿದ್ಧಗಂಗಾಮಠದ ಸಿದ್ಧಲಿಂಗ ಮಹಾಸ್ವಾಮಿಜೀ, ಸಾಣೇಹಳ್ಳಿಯ ತರಳುಬಾಳು ಸಂಸ್ಥಾನ ಶಾಖಾಮಠ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜೀ, ಗದಗ ಡಂಬಳ ಎಡೆಯೂರು ಶ್ರೀ ತೋಂಟದಾರ್ಯ ಸಂಸ್ಥಾನಮಠ ಶ್ರೀ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಬೀದರ್ ಜಿಲ್ಲೆ ಭಾಲ್ಕಿಯ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಹಿರೇಮಠ ಸಂಸ್ಥಾನದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮ ಬಸವ ಧರ್ಮಪೀಠದ ಡಾ. ಗಂಗಾಮಾತಾಜಿಯವರು, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಮಾದಾರ ಚೆನ್ನಯ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:
error: Content is protected !!