ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್ ವಿರುದ್ಧ ಬಿಜೆಪಿಯ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಸಮಿತಿ ರಚನೆಗೆ ತೀರ್ಮಾನಿಸಿದೆ. ಜೊತೆಗೆ ಬಾಣಂತಿಯರ ಸಾವಿನ ಪ್ರಕರಣವನ್ನೂ ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಳಗಾವಿ ಅಧಿವೇಶನ ಹತ್ತು ದಿನ ನಿಗದಿಯಾಗಿತ್ತು. ಆದರೆ ಕನ್ನಡ ಸಾಹಿತ್ಯ ಸಮ್ಮೇಳನ ಇದೆ ಎಂದು ಅದನ್ನು 9 ದಿನಕ್ಕೆ ಇಳಿಕೆ ಮಾಡಲಾಯಿತು. ಬಸವಣ್ಣನವರ ವರ್ಣಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಒಂದು ದಿನ ಕಳೆಯಿತು. ಉಳಿದಿದ್ದು ಏಳು ದಿನ ಮಾತ್ರ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದಿಂದ ಎರಡು ದಿನ ಸದನ ನಡೆಯಲಿಲ್ಲ. ಉಳಿದಂತೆ ಬಿಜೆಪಿಗೆ ಚರ್ಚೆಗೆ ಕೇವಲ ಐದು ದಿನ ದೊರೆತಿದ್ದು, ವಕ್ಫ್ ಬೋರ್ಡ್, ಬಾಣಂತಿಯರ ಸಾವು, ಅನುದಾನ ತಾರತಮ್ಯ, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿ ಸರ್ಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡಿದ್ದೇವೆ. ಇದಕ್ಕೆ ಸಹಕರಿಸಿದ ಎಲ್ಲಾ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಸದನದಲ್ಲಿ ಒಟ್ಟು ಎರಡು ಗಂಟೆಗಳ ಕಾಲ ನಾನು ವಕ್ಫ್ ಬೋರ್ಡ್ ವಿಚಾರವಾಗಿ ದಾಖಲೆ ಸಮೇತ ಮಾತನಾಡಿದ್ದೇನೆ. ಸರ್ಕಾರದ ಆದೇಶ, ಕೋರ್ಟ್ ಆದೇಶ, ಬ್ರಿಟಿಷರಿಂದ ಆರಂಭವಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾಲದವರೆಗೂ ಯಾವ ರೀತಿ ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಹಂತ ಹಂತವಾಗಿ ಬಳಕೆ ಮಾಡಲಾಗಿದೆ ಎಂದು ವಿವರಿಸಿದ್ದೇನೆ ಎಂದರು.
ಬಾಣಂತಿಯರು ಹಾಗೂ ನವಜಾತ ಶಿಶುಗಳ ಸಾವಿಗೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಬಹಳಷ್ಟು ಚರ್ಚೆ ಮಾಡಿದ್ದೇವೆ. ಅವಧಿ ಮುಗಿದ ಔಷಧಿ ಬಗ್ಗೆಯೂ ದಾಖಲೆ ಕೊಟ್ಟಿದ್ದೇನೆ. ಆರೋಗ್ಯ ಸಚಿವರ ರಾಜೀನಾಮೆಗೂ ಸದನದಲ್ಲಿ ಆಗ್ರಹಿಸಿದ್ದೇವೆ. ಇದನ್ನು ನ್ಯಾಯಾಂಗ ತನಿಖೆಗೆ ವಹಿಸಲು ಸರ್ಕಾರ ಒಪ್ಪಿದೆ. ಇದು ಕೂಡ ವಿಧಾನಸಭೆಯ ಒಳಗೆ ಬಿಜೆಪಿಯ ಹೋರಾಟಕ್ಕೆ ಸಿಕ್ಕ ಜಯ ಎಂದು ಸಂತಸ ವ್ಯಕ್ತಪಡಿಸಿದರು.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಬಂಧನ ಹಾಗೂ ಬಿಡುಗಡೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಸರ್ಕಾರದ…