ರಾಜ್ಯ

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ.

ನಾಳೆ ಮಧ್ಯಾಹ್ನ 3:26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ 2 ನಿಮಿಷ 20 ಸೆಕೆಂಡುಗಳ ವರೆಗೆ ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಆದ್ರೆ ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ.

ನಾಳೆ ಮಧ್ಯಾಹ್ನ 3:26 ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57 ಕ್ಕೆ ಕೊನೆಗೊಳ್ಳಲಿದೆ. ಸೂರ್ಯ ಕಂಕಣದ ರೀತಿ 2 ನಿಮಿಷ 20 ಸೆಕೆಂಡುಗಳವರೆಗೆ ಗ್ರಹಣದ ವೇಳೆ ಕಾಣಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಕಂಕಣ ಸೂರ್ಯಗ್ರಹಣದಿಂದ ಹಲವೆಡೆ ಧಾರ್ಮಿಕ ಆಚರಣೆ ನಡೆಸಲಾಗುತ್ತದೆ. ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯಿಂದ ಅತ್ಯಂತ ದೂರದ ಬಿಂದುವಿನಲ್ಲಿ ಅಥವಾ ಹತ್ತಿರದಲ್ಲಿದ್ದಾಗ ಇಂತಹ ಗ್ರಹಣ ಸಂಭವಿಸುತ್ತದೆ ಎಂದು ನಾಸಾ ವಿಜ್ಞಾನಿಗಳು ವರ್ಣಿಸಿದ್ದಾರೆ. ಚಂದ್ರನು ಆಕಾಶದಲ್ಲಿ ಸ್ವಲ್ಪ ಚಿಕ್ಕದಾಗಿ ಕಾಣಿಸಿಕೊಳ್ಳಲಿದೆ. ಅದು ಸೂರ್ಯನನ್ನ ಸಂಪೂರ್ಣವಾಗಿ ಆವರಿಸಲು ಸಾಧ್ಯವಿಲ್ಲ. ಹಾಗಾಗಿ ಸಂಪೂರ್ಣ ಕತ್ತಲಾಗುವ ಬದಲಿಗೆ ವೀಕ್ಷಕರು ಸೂರ್ಯನ ಮುಂದೆ ಬಂದ ಚಂದ್ರನ ಗಾಢ ವೃತ್ತಾಕಾರದ ಸಿಲೂಯೆಟ್ (ಚಂದ್ರನ ಸುತ್ತ ಬೆಳಕು ಇರುವ ಮಾದರಿ) ಅನ್ನು ವೀಕ್ಷಿಸಬಹುದು. ಆಗ ಸೂರ್ಯನ ಬೆಳಕು ಉಂಗುರದ ಮಾದರಿಯಲ್ಲಿ ಗೋಚರಿಸುತ್ತದೆ. ಅದಕ್ಕಾಗಿ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ವಾರ್ಷಿಕ ಗ್ರಹಣದಲ್ಲಿ ಹಗಲು ಬೆಳಕಿನ ಆಟ ನಡೆಯುತ್ತದೆ ಎಂದಿದ್ದಾರೆ.

ಎಲ್ಲೆಲ್ಲಿ ಗೋಚರ?: 
ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾದ ಪ್ರದೇಶದಲ್ಲಿ, ದಕ್ಷಿಣ ಆಫ್ರಿಕಾ, ಟಾಂಜಾನಿಯಾ, ಜಾಂಬಿಯಾ ಮತ್ತು ಜಿಂಬಾಬ್ವೆಯಂತಹ ದೇಶಗಳಲ್ಲಿ ಗೋಚರವಾಗಲಿದೆ. ಆಕಾಶ ವೀಕ್ಷಕರು ವಿಶೇಷ ವೀಕ್ಷಣಾ ಸಾಧನಗಳನ್ನ ಬಳಸಿಕೊಂಡು ಗ್ರಹಣ ವೀಕ್ಷಿಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago