ರಾಜ್ಯ

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಿಸಲಾಗಿದೆ.

ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ಅವರು ಸೋಮವಾರ ಈ ನೂತನ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. “ಮಕ್ಕಳ ಆರೋಗ್ಯಕ್ಕೆ ಉತ್ತಮ ಚಿಕಿತ್ಸೆ ಮತ್ತು ಆರೈಕೆ ಒದಗಿಸುವ ಉದ್ದೇಶದಿಂದ ಈ ಅತ್ಯಾಧುನಿಕ ಆಸ್ಪತ್ರೆಯನ್ನು ಸರ್ಕಾರ ನಿರ್ಮಿಸಿದೆ. ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸರ್ಕಾರಿ ವಲಯದಲ್ಲಿ ಇದೇ ಮೊದಲು,” ಎಂದು ಸಚಿವರು ಹೇಳಿದರು.

ಈ ಆಸ್ಪತ್ರೆಯಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬರುವ ಮಕ್ಕಳ ರೋಗಿಗಳಿಗೂ ಒಂದೇ ರೀತಿಯ ಗುಣಮಟ್ಟದ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ತಿಳಿಸಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ 100% ಗುಣಮಟ್ಟದ ಆರೋಗ್ಯ ಸೇವೆ ನೀಡುವುದು ನಮ್ಮ ಸರ್ಕಾರದ ಗುರಿ,” ಎಂದು ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುತ್ತಿದೆ ಎಂದು ಹೇಳಿದರು. “ಈಗಾಗಲೇ 90% ಗುರಿ ಮುಟ್ಟಲಾಗಿದೆ. ಇನ್ನು 4-5 ಜಿಲ್ಲೆಗಳಲ್ಲಿ ಮಾತ್ರ ಕೆಲಸ ಬಾಕಿ ಉಳಿದಿದೆ. ಅತಿ ಶೀಘ್ರದಲ್ಲೇ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಪೂರ್ಣಗೊಳ್ಳುತ್ತವೆ,” ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

6 mins ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

13 mins ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

39 mins ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

2 hours ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

3 hours ago