ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರಗಳಿಂದ ಸಾಕಾನೆಗಳನ್ನು ಬಳಸಿಕೊಂಡು ಪುಂಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಏಕಲವ್ಯ ಆನೆಯ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ.
ಅಕ್ಟೋಬರ್.31ರಂದು ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಉಮೇಶ್ ಹಾಗೂ ಹರೀಶ್ ಎಂಬುವವರು ಮೃತಪಟ್ಟಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಈ ಹಿನ್ನೆಲೆಯಲ್ಲಿ ಪುಂಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಖಡಕ್ ಆದೇಶ ಹೊರಡಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…