Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು: ಗೃಹ ಸಚಿವ ಪರಮೇಶ್ವರ್‌ ಆಗ್ರಹ

ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಒತ್ತಾಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಅನೇಕ ಕಾರಣಗಳಿಂದ ನಿಧಾನವಾಗುತ್ತಿದೆ. ಈ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಣ ಬಿಡುಗಡೆ ಮಾಡಿಸುವಂತೆ ರಾಜ್ಯದ ಸಂಸದರಿಗೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ:- ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ 

ಇನ್ನು ಕೇಂದ್ರದಿಂದ ನಮಗೆ 5,500 ಕೋಟಿ ತಕ್ಷಣ ಬರಬೇಕು. ರಾಜ್ಯ ಮತ್ತು ಕೇಂದ್ರದ ನಡುವೆ ಇರುವ ಸಂಬಂಧದ ನಿಯಮಗಳನ್ನು ಆಧರಿಸಿ ಒತ್ತಾಯ ಮಾಡಬೇಕಾಗುತ್ತದೆ ಎಂದರು.

Tags:
error: Content is protected !!