ರಾಜ್ಯ

ಜನ ಸಂಸ್ಕೃತಿಗಳನ್ನು ಚೆನ್ನಾಗಿ ಅರಿತರೆ ಮಾತ್ರ ದೇಶದ ಭವಿಷ್ಯ, ಸಂಸ್ಕೃತಿ ರೂಪಿಸಲು ಸಾಧ್ಯ: ಸಿ.ಎಂ.ಸಿದ್ದರಾಮಯ್ಯ

  • ನಾವು ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ: ಸಿಎಂ ವಿಶ್ಲೇಷಣೆ
  • ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಹಿಟ್ಲರ್ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು.
  • ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ.

ಕನಕಗಿರಿ :  ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದ ಅವರು,  ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.‌

ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು.

ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ ಎಂದರು.

ನಾವು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ.

ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾವು ವಿಶ್ವ ವಿದ್ಯಾಲಯಕ್ಕೆ ಅಕ್ಕಮಹದೇವಿ ಹೆಸರು ಇಟ್ಟೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎನ್ನುತ್ತಾ ಸಮಾನತೆಯ ಹಾದಿಯಲ್ಲಿ ಸರ್ಕಾರ ಜಾರಿಗೆ ತಂದ ಹಲವು ಭಾಗ್ಯಗಳನ್ನು ವಿವರಿಸಿದರು.

ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

andolana

Recent Posts

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

1 hour ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

2 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

2 hours ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

16 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

16 hours ago