ರಾಜ್ಯ

ವಿಧಾನಸೌಧದಲ್ಲಿ ಕೊಡು-ಕೊಳ್ಳುವ ವ್ಯವಸ್ಥೆ ಬಂದುಬಿಟ್ಟಿದೆ; ಎಚ್.ವಿಶ್ವನಾಥ್

ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ವಿಷಾದ ವ್ಯಕ್ತಪಡಿಸಿದರು.

ಮೈಸೂರಿನ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕರ್ನಾಟಕ ಸೇನಾ ಪಡೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 7 ಕೋಟಿ ಜನರ ಪ್ರಾಧಿಕಾರವಾಗಿರುವ ವಿಧಾನಸೌಧದಲ್ಲಿ ಈ ಹಿಂದೆ ಎಂತಹ ನಾಯಕರು, ಮುತ್ಸದ್ಧಿಗಳು ಆಡಳಿತ ನಡೆಸಿದ್ದರು. ಹಿರಿಯರು ಓಡಾಡಿದ ಜಾಗದಲ್ಲಿ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕನ್ನಡವನ್ನು ಮಾರಬಹುದು, ಸಂಸ್ಕೃತಿಯನ್ನೂ ಮಾರಬಹುದು ಎಂದು ವಿಷಾಧಿಸಿದರು.

ಅಂತಹ ಹಿರಿಯರು ಆಡಳಿತ ನಡೆಸಿದ ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆಯಾಗಿ ಬಿಟ್ಟಿದೆ ಎಂದು ಪ್ರಸ್ತುತ ಸ್ಥಿತಿ ಬಗ್ಗೆ ವಿಷಾದದಿಂದ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

14 mins ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

16 mins ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

19 mins ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

21 mins ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

28 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

32 mins ago