ರಾಜ್ಯ

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ ಮೇಲಿನ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಇದೀಗ ಪಟಾಕಿ ಮಾರಾಟ ಹಾಗೂ ಬಳಕೆಯ ಮೇಲೆ ಕಣ್ಣಿಟ್ಟಿದೆ.

ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಮತ್ತು ಮಾರಾಟ ಮಾಡಬೇಕು ಎಂದು ಪರಿಸರ ಹಾಗೂ ವಲಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಮತ್ತು ವಾಯು ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸರ್ಕಾರ ಮುಂದಾಗಿದೆ.

ಇದರನ್ವಯ, ಹಸಿರು ಪಟಾಕಿಗಳನ್ನು ಹೊರತುಪಡಿಸಿ, ರಾಸಾಯನಿಕಯುಕ್ತ ಮತ್ತು ಅಧಿಕ ಶಬ್ಧ ಹಾಗೂ ಮಾಲಿನ್ಯ ಉಂಟುಮಾಡುವ ಪಟಾಕಿಗಳನ್ನು ಮಾರಾಟ ಮಾಡುವಂಗಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಇಂತಹ ಪಟಾಕಿಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಸಂಬಂಧಪಟ್ಟ ಅಂಗಡಿ ಮಾಲೀಕರ ವಿರುದ್ಧ ಯಾವುದೇ ಮುನ್ಸೂಚನೆ ಇಲ್ಲದೆ ನೇರವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಈ ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಪಟಾಕಿ ಮಾರಾಟ ಮಾಡುವ ಎಲ್ಲಾ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳು ತಾವು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದಾಗಿ ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಮುಚ್ಚಳಿಕೆ ಬರೆದುಕೊಡಬೇಕು ಎಂಬ ಕಡ್ಡಾಯ ನಿಯಮವನ್ನು ಜಾರಿಗೆ ತರಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

28 mins ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

55 mins ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

1 hour ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

3 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

8 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

9 hours ago