ಬೆಂಗಳೂರು: ರಾಜ್ಯ ಸರ್ಕಾರ ಮಾರ್ಚ್.7 ರಂದು ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅವರು ಸಿದ್ಧತೆ ಮಾಡಿಕೊಂಡಿದ್ದು, ಫೆಬ್ರವರಿ 6 ರಿಂದ 14ರವರೆಗೂ ಬಜೆಟ್ ಪೂರ್ವಭಾವಿಯಲ್ಲಿ ಬಜೆಟ್‌ನ ಕುರಿತು ಚರ್ಚೆ ನಿಗಧಿಯಾಗಿದೆ. ಅಲ್ಲದೇ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಬಗ್ಗೆ ಬಜೆಟ್ ಸಿದ್ಧತಾ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರ ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಅಧಿವೇಶನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಆದರೆ ಸರ್ಕಾರ ಮುಂದಿನ ಕ್ಯಾಬಿನೆಟ್‌ನಲ್ಲಿ ಬಜೆಟ್ ದಿನಾಂಕ ಮತ್ತು ಜಂಟಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲಿರುವ ಕುರಿತು ಅಧಿಕೃತ ಘೋಷಣೆ ಮಾಡಲಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.