Mysore
23
broken clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

DCM D.K. Shivakumar says there will be a big revolution in the state by 2028

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200 ಯೂನಿಟ್‌ ಉಚಿತ ಕರೆಂಟ್‌, ಗೃಹಲಕ್ಷ್ಮೀ, ಫ್ರೀಬಸ್‌, ಅನ್ನಭಾಗ್ಯ, ಶಕ್ತಿಯೋಜನೆಯಿಂದ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ ನಿಮಗೆ ಮಾನಸಿಕವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ದೊಡ್ಡ ತೀರ್ಮಾನವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.

ಇನ್ನು ಜೇಬಲ್ಲಿ 10 ರೂಪಾಯಿ ಇದ್ದರೆ ಕೊಡೋನು 100 ರೂಪಾಯಿ ಕೊಡೋಕೆ ಮುಂದೆ ಬರ್ತಾನೆ. ಆದ್ದರಿಂದ ಸರ್ಕಾರಕ್ಕೆ ಹೊರೆಯಾದರೂ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

 

Tags:
error: Content is protected !!