cm siddu
ಬೆಂಗಳೂರು : ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ದಯೆಯಿಲ್ಲದ ದರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಧಾರ್ಮಿಕ ಸಹಿಷ್ಣತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ.
ಬಸವಣ್ಣನವರು ಹೇಳಿದ ಮೌಲ್ಯಗಳನ್ನೇ ಗಾಂಧಿ, ಅಂಬೇಡ್ಕರ್ ಅವರೂ ಹೇಳಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ದವಾಗಿದ್ದು ಎಲ್ಲರಿಗೂ ಸಮಾನ ರಕ್ಷಣೆ ನೀಡುತ್ತದೆ ಎಂದರು.
ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.
ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ಯಲ್ಲಿ ಮಹಾಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…