ರಾಜ್ಯ

ಭ್ರೂಣ ಹತ್ಯೆ’ ಕಾಯ್ದೆ ತಿದ್ದುಪಡಿಗೆ ಸರ್ಕಾರ ಚಿಂತನೆ!

ಬೆಂಗಳೂರು : ‘ಭ್ರೂಣ ಹತ್ಯೆ’ ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ 5 ಲಕ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಭ್ರೂಣ ಹತ್ಯೆ ತಡೆಗೆ ರಾಜ್ಯ ಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗುವುದು.

ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಪಿಸಿಪಿಎನ್ಡಿಟಿ ಕಾಯ್ದೆ ಅಡಿ ಕಾರ್ಯ ನಿರ್ವಹಿಸಿ ಹೆಚ್ಚು ನಿಗಾ ವಹಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಭ್ರೂಣ ಹತ್ಯೆಗೆ ಈಗಿರುವ ಕಾಯ್ದೆಯಲ್ಲಿ ₹ 10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. ಇದನ್ನು ₹ 5 ಲಕ್ಷದವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು, ಜಾಮೀನುರಹಿತ ಅಪರಾಧ ಎಂದು ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

andolanait

Recent Posts

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

1 hour ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

1 hour ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

3 hours ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

4 hours ago