Human fetus inside the womb
ಬೆಂಗಳೂರು : ‘ಭ್ರೂಣ ಹತ್ಯೆ’ ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ 5 ಲಕ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಭ್ರೂಣ ಹತ್ಯೆ ತಡೆಗೆ ರಾಜ್ಯ ಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗುವುದು.
ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಪಿಸಿಪಿಎನ್ಡಿಟಿ ಕಾಯ್ದೆ ಅಡಿ ಕಾರ್ಯ ನಿರ್ವಹಿಸಿ ಹೆಚ್ಚು ನಿಗಾ ವಹಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಭ್ರೂಣ ಹತ್ಯೆಗೆ ಈಗಿರುವ ಕಾಯ್ದೆಯಲ್ಲಿ ₹ 10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. ಇದನ್ನು ₹ 5 ಲಕ್ಷದವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು, ಜಾಮೀನುರಹಿತ ಅಪರಾಧ ಎಂದು ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…