ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರೀಕ್ಷೆ ಮೀರಿ ಅಭಿಮಾನಿಗಳು ಬಂದಿದ್ದರು. ಇನ್ನೂ ಒಳ್ಳೆಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಇದರ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆ. ನಮ್ಮ ಕಡೆಯಿಂದ ಲೋಪ ಆಗಿರುವುದು ನಿಜ. ಆದರೆ ಬಿಜೆಪಿಯವರು ರಾಜಕೀಯ ಮಾಡೋದು ಸರಿಯಲ್ಲ. ಬಿಜೆಪಿಯವರ ಆರೋಪಗಳಿಗೆ ಗಮನ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.
ಇದನ್ನೂ ಓದಿ:- ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ನಿನ್ನೆಯ ಘಟನೆಗೆ ಸಿಎಂ, ಡಿಸಿಎಂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮುಂದೆ ಇಂತಹ ಘಟನೆಗಳು ಆಗದಂತೆ ನಿಗಾ ವಹಿಸುತ್ತೇವೆ ಎಂದರು.





