ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಡೆಯಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ತಿರಸ್ಕರಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರು ಕೊಟ್ಟ ಕಾರಣಗಳು ಹೀಗಿವೆ…..
- ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.
- ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಪರೀತವಾಗಿದೆ.
- ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಜೊತೆಗೆ ಬಡವರಿಗೂ ತೊಂದರೆಯಾಗಲಿದೆ.





