ರಾಜ್ಯ

ಉದ್ಯೋಗಾಕಾಂಕ್ಷಿಗಳ ಆಶೋತ್ತರ ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಜೆಡಿಎಸ್‌ ಆಕ್ರೋಶ

ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು ಖಾಲಿ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಜೆಡಿಎಸ್‌ ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವು, ಒಂದು ವರ್ಷದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಬುರುಡೆ ಬಿಟ್ಟಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಕುರ್ಚಿಗಾಗಿ ಪ್ರತಿ ನಿತ್ಯ ಹೋರಾಡುತ್ತಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೇ, ಬದುಕು ಅತಂತ್ರವಾಗಿದೆ ಎಂದು ಆಕ್ರೋಶ ಹೊರಹಾಕಿದೆ.

ಉದ್ಯೋಗಾಕಾಂಕ್ಷಿಗಳ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯುವ ಜನತೆ ಸಿಡಿದೆದ್ದಿದೆ. ಖಾಲಿ ಇರುವ 2.85 ಲಕ್ಷಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ಯುವ ಜನತೆ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

1 hour ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

1 hour ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

2 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

14 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

16 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

17 hours ago