ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು ಖಾಲಿ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಒಂದು ವರ್ಷದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಬುರುಡೆ ಬಿಟ್ಟಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಕುರ್ಚಿಗಾಗಿ ಪ್ರತಿ ನಿತ್ಯ ಹೋರಾಡುತ್ತಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೇ, ಬದುಕು ಅತಂತ್ರವಾಗಿದೆ ಎಂದು ಆಕ್ರೋಶ ಹೊರಹಾಕಿದೆ.
ಉದ್ಯೋಗಾಕಾಂಕ್ಷಿಗಳ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುವ ಜನತೆ ಸಿಡಿದೆದ್ದಿದೆ. ಖಾಲಿ ಇರುವ 2.85 ಲಕ್ಷಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ಯುವ ಜನತೆ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…