ರಾಜ್ಯ

ಸರ್ಕಾರ ರಾಜ್ಯವನ್ನು ಲೂಟಿ ಮಾಡಲು ಮತ್ತೊಂದು ಅಡ್ಡದಾರಿ ಹಿಡಿದಿದೆ: ಆರ್.ಅಶೋಕ್‌

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ ಲಿಕ್ವರ್‌ ಹಗರಣದ ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಆರ್.‌ಅಶೋಕ್‌ ಅವರು, ಅಸ್ತಿತ್ವದಲ್ಲೇ ಇಲ್ಲದ ಮದ್ಯದ ಅಂಗಡಿಗಳನ್ನು ಕಾನೂನು ಬಾಹಿರವಾಗಿ ಹರಾಜು ಹಾಕಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನ ಲೂಟಿ ಮಾಡಲು ಮತ್ತೊಂದು ಅಡ್ಡದಾರಿ ಹಿಡಿಯಲು ಹೊರಟಿದೆ.

ಮುಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಸಂಪೂರ್ಣವಾಗಿ ಬ್ಯುಸಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಪಾಪ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ, ಗೃಹಲಕ್ಷ್ಮಿ ಹಣ ಪಾವತಿ ಬಾಕಿ ಇರುವುದೇ ಗೊತ್ತಿಲ್ಲವಂತೆ.

ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು. ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ.

ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ ಹಾಗೂ ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

10 mins ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

21 mins ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

29 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

40 mins ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

1 hour ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

10 hours ago