ರಾಜ್ಯ

ರಾಜ್ಯಪಾಲರು ದ್ವೇಷ ಭಾಷಣ ಬಿಲ್‌ ತಮ್ಮ ಬಳಿ ಇಟ್ಟುಕೊಂಡಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್‌ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಲ್‌ ಅನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ತಿರಸ್ಕಾರ ಮಾಡಿಲ್ಲ. ಮಸೂದೆಯನ್ನು ಸ್ವೀಕಾರವೂ ಮಾಡಿಲ್ಲ, ತಿರಸ್ಕಾರವೂ ಕೂಡ ಮಾಡಿಲ್ಲ. ಬಿಲ್‌ ರಿಜೆಕ್ಟ್‌ ಮಾಡಿದ ಮೇಲೆ ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ. ಆಮೇಲೆ ಸರ್ಕಾರ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.

ಸರ್ಕಾರದಿಂದ 22 ರಿಂದ 25 ಬಿಲ್‌ಗಳನ್ನು ರಾಜ್ಯಪಾಲರಿಗೆ ಕಳಿಸಿದ್ದವು. ಬಹಳಷ್ಟು ಬಿಲ್‌ಗಳಿಗೆ ಸಹಿ ಮಾಡಿ ಕಳುಹಿಸಿದ್ದಾರೆ. ಕೆಲವು ಬಿಲ್‌ಗಳು ಮಾತ್ರ ಇನ್ನೂ ರಾಜ್ಯಪಾಲರ ಬಳಿಯೇ ಇದೆ. ಒಳಮೀಸಲಾತಿ ವಿಚಾರವಾಗಿ ಅವರು ಸ್ಪಷ್ಟನೆ ಕೇಳಿದ್ದಾರೆ. ಅವರು ಕೂಡ ಈ ಬಿಲ್‌ ಓದಿದ ಬಳಿಕ ಒಪ್ಪಿಗೆ ಕೊಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

9 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

9 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

10 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

10 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

10 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

10 hours ago