Mysore
22
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ.

ಈ ಹಿಂದೆ ಕೆಳಹಂತದ ನ್ಯಾಯಾಲಯ ನೀಡಿದ್ದ ಮನೆಯೂಟದ ಸೌಲಭ್ಯವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್‌ ನಾಗಪ್ರಸನ್ನ ಅವರಿದ್ದ ಪೀಠವು ಕೆಳಹಂತದ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿತು. ಹೈಕೋರ್ಟ್‌ ತನ್ನ ತೀರ್ಪಿನಲ್ಲಿ ಕೆಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ.

ಯಾವುದೇ ಕೈದಿಗೆ ಮನೆಯೂಟ ನೀಡಬೇಕಾದರೆ ಬಲವಾದ ವೈದ್ಯಕೀಯ ಕಾರಣಗಳು ಇರಲೇಬೇಕು. ವೈದ್ಯಕೀಯ ಸಲಹೆ ಇಲ್ಲದೇ ಸುಖಾಸುಮ್ಮನೆ ಮನೆಯೂಟಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

 

Tags:
error: Content is protected !!