Mysore
21
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಕೇಸ್‌ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ವಕ್ಫ್‌ ನೋಟಿಸ್‌ ನೀಡಿದ್ದಕ್ಕಾಗಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ಅರ್ಜಿಯನ್ನು ಹೈಕೋರ್ಟ್‌ ರದ್ದು ಮಾಡಿದೆ.

ಎಫ್‌ಐಆರ್‌ ಅನ್ನು ರದ್ದು ಮಾಡುವಂತೆ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಾದ-ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಈಗ ತೀರ್ಪು ಹೊರಬಂದಿದ್ದು, ಸಂಸದ ತೇಜಸ್ವಿ ಸೂರ್ಯರಿಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ಏನಿದು ಪ್ರಕರಣ:
ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾಗಿದೆ ಎಂಬ ಕಾರಣದಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿದ್ದವು. ಮಾಧ್ಯಮ ವರದಿಯನ್ನು ಆಧರಿಸಿ ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದರು. ಅದು ಸುಳ್ಳು ಎಂದು ಗೊತ್ತಾದ ನಂತರ ಅದನ್ನು ತಮ್ಮ ಖಾತೆಯಿಂದ ಟಿಲೀಟ್‌ ಮಾಡಿದ್ದರು. ರೈತರ ಆತ್ಮಹತ್ಯೆ ವಿಚಾರದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು.

Tags: