ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕಾಗಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್ ಅರ್ಜಿಯನ್ನು ಹೈಕೋರ್ಟ್ ರದ್ದು ಮಾಡಿದೆ.
ಎಫ್‌ಐಆರ್ ಅನ್ನು ರದ್ದು ಮಾಡುವಂತೆ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಾದ-ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಈಗ ತೀರ್ಪು ಹೊರಬಂದಿದ್ದು, ಸಂಸದ ತೇಜಸ್ವಿ ಸೂರ್ಯರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಏನಿದು ಪ್ರಕರಣ:
ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ ಎಂಬ ಕಾರಣದಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿದ್ದವು. ಮಾಧ್ಯಮ ವರದಿಯನ್ನು ಆಧರಿಸಿ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಅದು ಸುಳ್ಳು ಎಂದು ಗೊತ್ತಾದ ನಂತರ ಅದನ್ನು ತಮ್ಮ ಖಾತೆಯಿಂದ ಟಿಲೀಟ್ ಮಾಡಿದ್ದರು. ರೈತರ ಆತ್ಮಹತ್ಯೆ ವಿಚಾರದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…