ರಾಜ್ಯ

ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.

ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

• ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 9 ದಿನಗಳ ಬದಲು 11 ದಿನಗಳ ಕಾಲ ನಡೆಯಲಿದೆ.
• ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
• ವಿಶ್ವವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
• ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
• ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌.2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.
• ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.
• ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.
• ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳಿ.
• ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.
• ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.
• ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.
• ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.
• ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.
• ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.
• ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.
• ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
• ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.
• ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.
• ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.
• ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

5 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

5 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

5 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

5 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

6 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

6 hours ago