Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರ ಅಪ್ರಸ್ತುತ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ ಎಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಎಂದಿಗೂ ಕೂಡ ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ಇನ್ನು ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.

ಇನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ. ಈಗ ಅವರನ್ನು ಕಳೆದುಕೊಂಡಿರುವುದು ತೀವ್ರ ದುಃಖ ತರಿಸಿದೆ ಎಂದರು.

 

 

Tags:
error: Content is protected !!