ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತೆ ಎನ್ನುವ ಮಹಿಳೆ ಮೇಲೆ ದೌರ್ಜನ್ಯ ಆಗಿದೆ. ಇದೊಂದು ಅಮಾನುಷವಾದ ಘಟನೆ. ಸುಪ್ರೀಂಕೋರ್ಟ್ ಆದೇಶ ಇದೆ. ಮಹಿಳೆಯ ಬಂಧನಕ್ಕೆ ನಿಯಮ ಇದೆ. ಬಿಜೆಪಿ ಕಾರ್ಯಕರ್ತೆಯನ್ನು ಟೆರರಿಸ್ಟ್, ದರೋಡೆಕೋರರನ್ನು ಬಂಧನ ಮಾಡುವ ರೀತಿ ಬಂಧನ ಆಗಿದೆ. ಇದು ಸರಿಯಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಕಾರ್ಪೋರೇಟರ್ ಸ್ಟೇಷನ್‌ಗೆ ಹೋಗಿದ್ದಾರೆ. ಇದೆಲ್ಲವೂ ಅನುಮಾನಕ್ಕೆ ಕಾರಣವಾಗಿದೆ. ಇದೆಲ್ಲವೂ ಸಂಶಯಾಸ್ಪದವಾಗಿದೆ. ಈ ಸರ್ಕಾರ ಬಂದ ಮೇಲೆ ಇಂತಹ ದೌರ್ಜನ್ಯ ಪ್ರಕರಣಗಳು ಜಾಸ್ತಿ ಆಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.




