ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಶಾಸಕ ಅಶ್ವಥ್ ನಾರಾಯಣ್ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು. ವಿದೇಶದಿಂದ ಹಣ ಬಂದಿದೆ ಎಂಬ ಆರೋಪಗಳಿವೆ. ಈ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಇನ್ನು ಈಗಾಗಲೇ ಪ್ರಕರಣದ ಹಿಂದಿರುವ ಕೈವಾಡ ಬಯಲಾಗಿದೆ. ದೂರುದಾರನಿಗೆ ಬೆಂಬಲ ನೀಡಿದವರ ಬಗ್ಗೆಯೂ ತನಿಖೆಯಾಗಲಿ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಎನ್‌ಐಎ ತನಿಖೆ ನಡೆಸಿದರೆ ಎಲ್ಲವೂ ಹೊರಬರುತ್ತದೆ ಎಂದು ತಿಳಿಸಿದರು.





