ರಾಜ್ಯ

ಧರ್ಮಸ್ಥಳ ಪ್ರಕರಣ | ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಧರ್ಮಸ್ಥಳದಲ್ಲಿನ ಎಸ್‍ಐಟಿ ತನಿಖೆ ಎಲ್ಲಿಗೆ ಹೋಗುತ್ತದೆ ಎಂದು ಹೇಳಲಾಗುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‍ಐಟಿ ಸಂಸ್ಥೆಯ ಮುಖ್ಯಸ್ಥ ಪ್ರಣಬ್ ಮೊಹಾಂತಿ ಇಂದು ತಮನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಸಮಾಲೋಚನೆಯ ವಿಚಾರಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.‌

ಎಸ್‍ಐಟಿಯವರಿಗೆ ಈಗಾಗಲೇ ತನಿಖೆಯ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಅದರಂತೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖೆ ಬೇಗ ಮುಗಿಸಿ ಎಂದು ಹೇಳಬಹುದಷ್ಟೇ. ಅದರೆ ಬೇಗ ವರದಿ ಕೊಡಿ, ಈ ವಾರದಲ್ಲೇ ತನಿಖೆ ಮುಗಿಸಿ, ಮುಂದಿನವಾರ ವರದಿ ಕೊಡಿ ಎಂದು ಸೂಚನೆ ನೀಡಲು ಅವಕಾಶವಿಲ್ಲ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಉತ್ಖನನ ಮಾಡಿದಾಗ ದೊರೆತ್ತಿರುವ ಹಲವಾರು ಅಂಶಗಳನ್ನು ಎಫ್‍ಎಸ್‍ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸಾಕಷ್ಟು ರೀತಿಯ ವಿಶ್ಲೇಷಣೆಗಳು ನಡೆಯಬೇಕಿದೆ. ವರದಿ ಯಾವ ರೀತಿ ಇರುತ್ತದೆ ಎಂದು ನನಗೆ ಗೊತ್ತಿಲ್ಲ. ಅನಗತ್ಯವಾಗಿ ಊಹ-ಪೋಹಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ತನಿಖೆಗೆ ಕಾಲಮಿತಿ ವಿಧಿಸಿಲ್ಲ. ತ್ವರಿತವಾಗಿ ಪ್ರಕ್ರಿಯೆಗಳನ್ನು ನಡೆಸಿ ಎಂದು ಸಲಹೆ ನೀಡಬಹುದು. ಆದರೆ ಎಲ್ಲವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳ ಬೇಕಿರುವುದರಿಂದ ಒತ್ತಡ ಹೇರುವುದು ಸರಿಯಲ್ಲ. ವಿಚಾರಣಾ ಹಂತದಲ್ಲಿ ಬೇರೆ ಬೇರೆ ರೀತಿಯ ಮಾಹಿತಿಗಳು ಸಿಕ್ಕರೆ ಅವುಗಳನ್ನು ಎಸ್‍ಐಟಿ ಅಧಿಕಾರಿಗಳು ತನಿಖೆಗೊಳಪಡಿಸುತ್ತಾರೆ ಎಂದರು.

ರಾಜ್ಯಸರ್ಕಾರ ಯಾವುದೇ ರೀತಿಯ ನಿರ್ದೇಶನ ನೀಡುವುದಿಲ್ಲ. ಸೌಜನ್ಯ ಅವರ ತಾಯಿ ದೂರು ನೀಡಿರುವ ಬಗ್ಗೆಯೂ ಎಸ್‍ಐಟಿ ಅವರೇ ಪರಿಶೀಲನೆ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತರುವುದು ಸೇರಿದಂತೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಎಸ್‍ಐಟಿಯವರು ನಿರ್ಧರಿಸುತ್ತಾರೆ. ಆತನಿಗೆ ಆಶ್ರಯ ಕೊಟ್ಟವರನ್ನು ಬಂಧಿಸಬೇಕೆ? ಬೇಡವೇ? ಎಂಬುದು ಕೂಡ ಎಸ್‍ಐಟಿ ಆಧಿಕಾರಿಗಳ ವಿವೇಚನೆಗೆ ಸೇರಿದೆ.ವಿರೋಧ ಪಕ್ಷಗಳು ಹೇಳಿದಂತೆ ತನಿಖೆ ನಡೆಸುವುದಾಗಲೀ, ಕಾಲಮಿತಿ ವಿಧಿಸುವುದಾಗಲೀ ಸಾಧ್ಯವಿಲ್ಲ. ರಾಜಕೀಯಕ್ಕಾಗಿ ಅವರು ಮಾತನಾಡುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಸ್ಷಷ್ಟಪಡಿಸಿದರು.

ತನಿಖೆ ಉತ್ತಮವಾಗಿ ನಡೆಯುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಎಲ್ಲರೂ ಎಸ್‍ಐಟಿಯನ್ನು ಸ್ವಾಗತ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎನ್‍ಐಎ ಸಂಸ್ಥೆಗೆ ವಹಿಸಬೇಕು ಎಂದರೆ ಅದು ಅಸಾಧ್ಯ. ನಾವು, ನೀವು ಅಥವಾ ಬೇರೆಯವರು ಹೇಳಿದಂತೆ ಆಗುವುದಿಲ್ಲ. ಎಸ್‍ಐಟಿಗೆ ನಿಯಮ ಬದ್ಧವಾದ ಕ್ರಮಗಳಿವೆ. ಅದರ ಪ್ರಕಾರವೇ ನಡೆಯುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

50 mins ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

1 hour ago

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಹಂಗಾಮ: ನಾಯಕರ ನಡುವೆ ಜಟಾಪಟಿ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…

2 hours ago

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

3 hours ago

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…

3 hours ago

ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಹೈಕೋರ್ಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು…

4 hours ago