ಕೊಪ್ಪಳ: ಜ.22 ರ ‘ರಾಮ ಮಂದಿರ’ ಶಂಕುಸ್ಥಾಪನೆಗೆ ಇನ್ನೂ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲ, ಬಂದರೆ ನಿರ್ಧಾರ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.
ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು, ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಎದುರು ನೋಡುತ್ತಿದೆ.