ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವ ವಿಚಾರದಲ್ಲಿ ನಮಗೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆಗ್ರಹಿಸಿದ್ದು, ನಮ್ಮ ಸಮುದಾಯದ ಹೆಣ್ಣು ಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆಯಲಾಗಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಈವರೆಗೂ ನಮಗೆ ಯಾವುದೇ ಪತ್ರ ಬಂದಿಲ್ಲ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ. ಒಂದು ವೇಳೆ ಪತ್ರ ಬಂದಿದ್ದರೆ ಈ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಹೇಳಿದರು.





