ಚಿತ್ರದುರ್ಗ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲವೂ ನಗರ ನಕ್ಸಲರ ಕೈವಾಡ. ಷಡ್ಯಂತ್ರದ ಹಿಂದಿರುವವರು ಯಾರು ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರವಾಗಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಯಾರು ಷಡ್ಯಂತ್ರ ನಡೆಸಿದವರು ಎಂಬುದನ್ನು ಬಹಿರಂಗಪಡಿಸಬೇಕು. ಮೊದಲು ಎಸ್‌ಐಟಿ ಅಧಿಕಾರಿಗಳು ಮಧ್ಯಂತರ ವರದಿ ಬಿಡುಗಡೆ ಮಾಡಲಿ ಎಂದರು.
ಎಲ್ಲಾ ಷಡ್ಯಂತ್ರಗಳ ಹಿಂದೆ ನಗರ ನಕ್ಸಲರು ಇದ್ದಾರೆ. ನಗರ ನಕ್ಸಲರು ಸಿಎಂ ಸಿದ್ದರಾಮಯ್ಯ ಅವರನ್ನು ಸುತ್ತುವರೆದು ಈ ತನಿಖೆ ನಡೆಸಿದ್ದಾರೆ. ಮುಸುಕುಧಾರಿ ದೂರುದಾರ ಸರ್ಕಾರಕ್ಕೆ ಮುಸುಕು ಹಾಕಿದ್ದಾನೆ. ಬೆಟ್ಟ ಅಗೆದರೂ ಇಲಿಯೂ ಸಿಗಲಿಲ್ಲ. ಮುಸುಕುಧಾರಿ ಇನ್ನೂ ನೂರು ಕಡೆ ತೋರಿಸಲು ಹೊರಟಿದ್ದಾನೆ. ಕಡೆಗೆ ಮಂಜುನಾಥನ ಕೆಳಗೆ ಹೂತಿದ್ದೇನೆ ಎನ್ನವಂಥದ್ದೂ ನಡೆಯುತ್ತಿದೆ. ಹಿಂದೂಗಳನ್ನು ಇಷ್ಟೊಂದು ಕಡೆಗಣಿಸುವುದಾ? ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…