Mysore
27
broken clouds

Social Media

ಭಾನುವಾರ, 19 ಏಪ್ರಿಲ 2026
Light
Dark

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ತಾಪಮಾನ ಕೊಂಚ ಸುಧಾರಣೆಯಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ.

Tags:
error: Content is protected !!