ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ತಾಪಮಾನ ಕೊಂಚ ಸುಧಾರಣೆಯಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…