ಬೆಂಗಳೂರು: ರಾಜ್ಯದಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೀದರ್‌ನಲ್ಲಿ ರಾಜ್ಯದಲ್ಲಿಯೇ ಅತ್ಯಂತ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇದ್ದು, ತಾಪಮಾನ ಭಾರೀ ಏರಿಳಿತವಾಗುತ್ತಿದೆ.





