ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ.
ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ.
5 ಗಂಟೆ 27 ನಿಮಿಷಗಳ ಕಾಲ ಗ್ರಹಣ ಇರಲಿದೆ. ಒಂದು ಗಂಟೆ 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದ್ದು, ಬರಿ ಗಣ್ಣಿನಲ್ಲೇ ಚಂದ್ರನನ್ನು ವೀಕ್ಷಿಸಬಹುದಾಗಿದೆ.
ಇಂದು ರಾತ್ರಿ 8.58ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗಲಿದೆ. ಇದು ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲಿ ಕೆಂಪು ಚಂದಿರನನ್ನು ವೀಕ್ಷಣೆ ಮಾಡಬಹುದಾಗಿದೆ. ತಡರಾತ್ರಿ 1.26ಕ್ಕೆ ಗ್ರಹಣ ಮುಕ್ತಾಯವಾಗಲಿದೆ.
ಸೂರ್ಯ, ಭೂಮಿ ಹಾಗೂ ಚಂದ್ರ ಸರಳರೇಖೆಯಲ್ಲಿ ಬಂದಾಗ ಚಂದ್ರನ ಮೇಲೆ ಬೀಳುವ ಸೂರ್ಯನ ಬೆಳಕನ್ನು ಭೂಮಿ ತಡೆಯುತ್ತದೆ. ಆಗ ಚಂದ್ರ ರಕ್ತವರ್ಣದ ಚಂದ್ರ ಗೋಚರಿಸುತ್ತದೆ. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವಾಲಯಗಳನ್ನು ಇಂದು ಮಧ್ಯಾಹ್ನದಿಂದಲೇ ಬಂದ್ ಮಾಡಲಾಗುತ್ತದೆ.
ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ…
ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್…
ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್, ಈಗ ಇರಾನ್ ಮೇಲಿನ ದಾಳಿಗಳನ್ನು…
ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…