Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮಂಡ್ಯ ಜಿಲ್ಲೆಯ ಜಮೀನೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆಯ ಬೆತ್ತಲೆ ಶವ ಪತ್ತೆ!

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಾಳುಬಿದ್ದ ಜಮೀನೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ. ಈ ಮಹಿಳೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ತಿರುಮಲಪುರ ಗ್ರಾಮದ 29 ವರ್ಷದ ಮಹಿಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪಕ್ಕದ ಹರ್ಷ ಹೋಟೆಲ್ ಸಮೀಪದ ಪಾಳು ಜಮೀನಿನಲ್ಲಿ ಬೆತ್ತಲೆಯಾಗಿ ಮಹಿಳೆ ಮೃತದೇಹ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಳ್ಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ಬುದ್ಧಿಮಾಂದ್ಯ ಮಹಿಳೆಯ ರೇಪ್​ & ಮರ್ಡರ್? ಜಮೀನೊಂದರಲ್ಲಿ ಬೆತ್ತಲೆ ಶವ ಪತ್ತೆ

ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಬುದ್ಧಿಮಾಂದ್ಯ ಮಹಿಳೆ ಇಂದು ಬೆತ್ತಲೆ ಶವವಾಗಿ ಪತ್ತೆಯಾಗಿದ್ದಾರೆ. ಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನಲಯೆ ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!