ಮೈಸೂರು : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯೊಳಗಿನ ಒಳ ಜಗಳ ಮತ್ತೊಂದು ಹಂತಕ್ಕೆ ತಿರುವು ಪಡೆದಿದ್ದು, ತಮ್ಮದೇ ಬಿಜೆಪಿ ಪಕ್ಷದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸ್ವಪಕ್ಷದ ನಾಯಕ ಅಶೋಕ್ ಅವರ ವಿರುದ್ಧ ಸಮಧಾನ ಹೊರಹಾಕಿದ್ದಾರೆ.
ಅಶೋಕ್ ವಿರುದ್ಧ ಕಿಡಿಕಾರಿದ ಎಸ್.ಆರ್. ವಿಶ್ವನಾಥ್ ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ದೂರಿದ್ದರು. ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಯವರಿಗೆ ಬಿಜೆಪಿಯವರೇ ಕೊಟ್ಟಿರುವ ಮತ್ತೊಂದು ಹೆಸರು ಬಕೆಟ್ ಜನತಾ ಪಾರ್ಟಿ ಎಂದು ಕಾಲೆಳೆದಿದ್ದಾರೆ.
ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್, ಅಶೋಕ್ ವಿರುದ್ಧ ನೀಡಿರುವ ಹೇಳಿಕೆನ್ನು ಉಲ್ಲೇಖಿಸಿ ಕಾಂಗ್ರೆಸ್ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ʼ ಆರ್. ಅಶೋಕ್ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು, ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಈಗ ಹೊಸದಾಗಿ ಬಕೆಟ್ ಜನತಾ ಪಾರ್ಟಿ ಸೇರ್ಪಡೆಯಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…