Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

ಗ್ರಂಥಾಲಯಕ್ಕೆ ʻಗೃಹಲಕ್ಷ್ಮಿʼ ಹೆಸರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ’ ಎಂದು ಹೆಸರಿಟ್ಟಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು‌ ಬರೆದಿರುವ ‘ಕಾನೂರು ಹೆಗ್ಗಡತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು.‌

ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.

Tags: