ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ’ ಎಂದು ಹೆಸರಿಟ್ಟಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು.
ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…